ರಾಮಮಂದಿರ ಕಾರ್ಯಕ್ರಮಕ್ಕೆ ಅಯೋಧ್ಯೆ ತೀರ್ಪು ನೀಡಿದ 5 ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಆಹ್ವಾನ

ಅಯೋಧ್ಯೆ: ನವೆಂಬರ್ 2019ರಲ್ಲಿ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಐವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ರಾಮಮಂದಿರದ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಅಯೋಧ್ಯೆ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್, ಅಶೋಕ್ ಭೂಷಣ್, ಎಸ್‌ಎ ಬೋಬ್ಡೆ ಮತ್ತು ಎಸ್ ಅಬ್ದುಲ್ ನಜೀರ್ ಅವರು ಪ್ರಕಟಿಸಿದರು. ಅತಿಥಿ ಪಟ್ಟಿಯಲ್ಲಿ ಹಲವಾರು ಇತರ ನ್ಯಾಯಾಧೀಶರು, ನ್ಯಾಯಶಾಸ್ತ್ರಜ್ಞರು ಮತ್ತು ವಕೀಲರು ಸೇರಿದ್ದಾರೆ.