ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: : ರಾಜ್ಯದಲ್ಲಿ ಮಾರ್ಚ್‌ 1 ರಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದ್ದು, ಮಾರ್ಚ್‌ 20ರ ವರೆಗೆ ಪರೀಕ್ಷೆ ನಡೆಯಲಿದೆ. 

ಇನ್ನೂ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. 

ರಾಜ್ಯದಲ್ಲಿ ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್‌ ಕಣ್ಗಾವಲು ಹಾಗೂ ಬಿಗಿ ಭದ್ರತೆ ಜೊತೆಗೆ ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ 1171 ಕೇಂದ್ರಗಳಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ. 

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಮತ್ತು ಐವರು ತೃತೀಯ ಲಿಂಗಿಗಳಿದ್ದಾರೆ. ಸಂಪೂರ್ಣ ಪೊಲೀಸ್ ಬಂದೊಬಸ್ತ್‌ನಲ್ಲಿ 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.