ಧಾರವಾಡ: ಪಿಓಪಿ ಗಣೇಶನ ವಿಗ್ರಹಗಳ ಪತ್ತೆಗೆ ಪ್ರತ್ಯೇಕ ತಂಡ - ಜಿಲ್ಲಾಧಿಕಾರಿ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಪಿಓಪಿ ಗಣೇಶನ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ಪತ್ತೆ ಮಾಡುವುದಕ್ಕೋಸ್ಕರ ಜಿಲ್ಲಾಧಿಕಾರಿಗಳು ತಂಡವೊಂದನ್ನು ರಚಿಸಲಾಗಿದೆ. ಅಲ್ಲದೇ ಪಿಓಪಿ ಗಣೇಶನ ಮೂರ್ತಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರೂ ದೂರು ಸಲ್ಲಿಸಬಹುದು. ದೂರು ಸಲ್ಲಿಸಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿರುವ ಡಿಸಿ, ಜಿಲ್ಲೆಯ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮಾಡಿರುವ ಹಾಗೂ ರಾಸಾಯನಿಕ, ಕೃತಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿದ್ದಾರೆ. ಈ ಕುರಿತು ನಿರಂತರ ತಪಾಸಣೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅವಳಿ ನಗರದ ವಾರ್ಡ ಮಟ್ಟದಲ್ಲಿ ಹಾಗೂ ಎಲ್ಲ ತಾಲೂಕು ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ದಿವ್ಯ ಪ್ರಭು ಅವರು
ಜಿಲ್ಲಾಡಳಿತ, ತಾಲೂಕು ಆಡಳಿತಗಳು ಮತ್ತು ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸಹಾಯವಾಣಿಗಳಿಗೆ, ಸಾರ್ವಜನಿಕರು ಪಿಓಪಿ ವಿಗ್ರಹಗಳನ್ನು ತಯಾರಿಸುವವರ, ಮಾರಾಟಗಾರರ ವಿವರಗಳನ್ನು ತಿಳಿಸಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮಾಹಿತಿದಾರರು, ಜಿಲ್ಲಾಧಿಕಾರಿಗಳ ಕಚೇರಿ 0836-244754, ಹು.ಧಾ.ಮ.ನ.ಪಾಲಿಕೆ ಕಚೇರಿ 9141051611, ಪೊಲೀಸ್ ಕಮೀಷನರ್ ಕಚೇರಿ 0836-2222603 ಮತ್ತು 9480802002 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.