ಶಾರುಖ್ ಖಾನ್ ಪತ್ನಿ ಗೌರಿ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ ನೋಟಿಸ್

ಮುಂಬೈ: ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ನೋಟೀಸ್ ಜಾರಿ ಮಾಡಿದೆ.
ಗೌರಿ ಖಾನ್ ಅವರು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಕಂಪನಿ ತುಲ್ಸಿಯಾನಿ ಗ್ರೂಪ್‌ನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಸಂಸ್ಥೆಯು ಹೂಡಿಕೆದಾರರು ಮತ್ತು ಬ್ಯಾಂಕ್‌ಗಳಿಗೆ ಸುಮಾರು 30 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಂಪನಿ ವಿರುದ್ಧ ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ಈ 30 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಗೌರಿ ಖಾನ್ ಕೂಡ ತನಿಖೆಗೆ ಒಳಪಡಲಿದ್ದಾರೆ. ಈ ಬಗ್ಗೆ ಸದ್ಯಕ್ಕೆ ಗೌರಿ ಖಾನ್‌ರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಆಕೆಯನ್ನು ಇಡಿ ವಿಚಾರಣೆಗೊಳಪಡಿಸುವ ನಿರೀಕ್ಷೆಯಿದೆ. ಪ್ರಕರಣದ ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ.