ಪ್ರಜ್ವಲ್‌ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್

ನವದೆಹಲಿ : ಪೆನ್‌ಡ್ರೈವ್ ಪ್ರಕರಣದ ಪ್ರಮುಖ ಆರೋಪಿ ವಿದೇಶದಲ್ಲಿ ತಲೆಮರಿಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನಿಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಯಾಕೆ ರದ್ದು ಮಾಡಬಾರದು ಎಂದು ಪ್ರಶ್ನಿಸಿ ಶೀಘ್ರ ಉತ್ತರ ನೀಡುವಂತೆ ಅದು ಸೂಚಿಸಿದೆ.
ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೇಂದ್ರಕ್ಕೆ ಎಸ್‌ಐಟಿ ಮತ್ತು ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಪ್ರತ್ರದ ಬೆನ್ನಲ್ಲೆ ವಿದೇಶಾಂಗ ಸಚಿವಾಲಯವು ಪ್ರಜ್ವಲ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭಿಸಿದೆ.
ಶೋಕಾಸ್ ನೋಟಿಸ್‌ಗೆ ಪ್ರಜ್ವಲ್ ರೇವಣ್ಣ ಉತ್ತರ ನೀಡದಿದ್ದಲ್ಲಿ ವಿದೇಶಾಂಗ ಸಚಿವಾಲಯ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲಿದೆ. ಬಳಿಕ ಜರ್ಮನಿಯಿಂದ ಬೇರೆ ಇನ್ಯಾವುದೇ ದೇಶಕ್ಕೆ ಪ್ರಜ್ವಲ್ ಪ್ರಯಾಣ ಮಾಡಲು ಸಾಧ್ಯವಿಲ್ಲ. ಪ್ರಯಾಣ ಮಾಡುವ ಪ್ರಯತ್ನಪಟ್ಟಿಲ್ಲಿ ಸ್ಥಳೀಯ ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.