ಬೆಂಗಳೂರು: ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿರ, ಮಣಿಪಾಲ್ ಆಸ್ಪತ್ರೆ ಸ್ಪಷ್ಟನೆ

ಬೆಂಗಳೂರು: ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿರ, ಮಣಿಪಾಲ್ ಆಸ್ಪತ್ರೆ ಸ್ಪಷ್ಟನೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ವಿಧಿವಶರಾಗಿದ್ದಾರೆಂಬ ವದಂತಿಗಳನ್ನು ಹರಡಿಸಬಾರದೆಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಪರೋಕ್ಷವಾಗಿ ಹೇಳಿದ್ದಾರೆ. 

ಇಂದು ಸಂಜೆ ಸುಮಾರಿಗೆ ಎಸ್.ಎಂ.ಕೃಷ್ಣ ಅವರು ವಿಧಿವಶರಾದರು ಎಂದು ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಿಂದಾಗಿ ಎಸ್.ಎಂ.ಕೆ ಅವರ ಕುಟುಂಬಸ್ಥರ ಮನಸ್ಸಿಗೆ ನೋವು ಉಂಟು ಮಾಡಿದಂತಿತ್ತು. ಇದನ್ನು ಗಮನಿಸಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಅದರಲ್ಲೂ ಎಸ್.ಎಂ.ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಸುನೀಲ್ ಕಾರಂತ್ ಮತ್ತು ಡಾ.ಸತ್ಯನಾರಾಯಣ ಅವರು ಈಗಷ್ಟೇ ಪ್ರಕಟಣೆಯ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ. 

ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೊಂಭತ್ತೆರಡು ದಾಟಿದ ಎಸ್.ಎಂ.ಕೃಷ್ಣ ಅವರನ್ನು ಕಂಡು ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳಲೆಂದು ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಮತ್ತಿತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದರು. ಇದಕ್ಕೂ ಮುನ್ನ ಮೊನ್ನೆ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರು ಎಸ್ಎಂಕೆ ಅವರ ಆರೋಗ್ಯವನ್ನು ವಿಚಾರಿಸಿಕೊಂಡಿದ್ದರು.