Breaking News: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಗೌರವ್ ಗೊಗೊಯ್, ತಾರಿಕ್ ಅನ್ವರ್, ಕೆ ಸುಧಾಕರನ್ ಬೆಂಬಲಿಸಿದ್ದಾರೆ.
2024ರ ಲೋಕಸಭೆ ಚುನಾವಣೆಗಳಲ್ಲಿ ವಿರೋಧ ಪಕ್ಷದ I.N.D.I.A ದೊಡ್ಡ ಗೆಲುವು ಸಾಧಿಸಿದ ನಂತರ ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿ (CWC) ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ.