ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಅತಿದೊಡ್ಡ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಅತಿದೊಡ್ಡ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ
ಪುಣೆಯಲ್ಲಿ ನಡೆದ ಏಕದಿನ ವಿಶ್ವಕಪ್ 2023ರ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು ನ್ಯೂಜಿಲೆಂಡ್ ತಂಡವನ್ನು 190 ರನ್‌ಗಳಿಂದ ಸೋಲಿಸಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದ್ವೀಪ ರಾಷ್ಟ್ರದ ವಿರುದ್ಧ ತಮ್ಮ ಅತಿದೊಡ್ಡ ವಿಜಯವನ್ನು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 4 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು 35.3 ಓವರ್‌ಗಳಲ್ಲಿ 167 ರನ್ ಗಳಿಗೆ ಆಲೌಟ್‌ಗೆ ತುತ್ತಾಗಿ ಸೋಲು ಒಪ್ಪಿಕೊಂಡಿತು. ಇನ್ನು ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಏಕದಿನ ವಿಶ್ವಕಪ್ 2023 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಏತನ್ಮಧ್ಯೆ, ನಡೆಯುತ್ತಿರುವ ಟೂರ್ನಿಯಲ್ಲಿ ನ್ಯೂಜಿಲೆಂಡ್‌ಗೆ ಇದು ಸತತ ಮೂರನೇ ಸೋಲು ಆಗಿದೆ.