27 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದ ದಕ್ಷಿಣ ಆಫ್ರಿಕಾ

27 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದ ದಕ್ಷಿಣ ಆಫ್ರಿಕಾ

ಲಾರ್ಡ್ಸ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2023-25ರ ಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ದಕ್ಷಿಣ ಆಫ್ರಿಕಾ ಮಣಿಸಿದೆ. ಇದರೊಂದಿಗೆ 27 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ. 

ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಲು 282 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ದಕ್ಷಿಣ ಆಫ್ರಿಕಾ ಕೊನೆಯ ಬಾರಿಗೆ ಐಸಿಸಿ ಟ್ರೋಫಿಯನ್ನು ಗೆದ್ದಿದ್ದು 1998 ರಲ್ಲಿ. ಐಸಿಸಿ ಏಕದಿನ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತ್ತು. ಇದನ್ನು ಹೊರತುಪಡಿಸಿ ದಕ್ಷಿಣ ಆಫ್ರಿಕಾ, ಈವರೆಗೆ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಪರಿಣಾಮ ಕಳೆದ ಎರಡೂವರೆ ದಶಕಗಳಿಂದ ದಕ್ಷಿಣಾ ಆಫ್ರಿಕಾ ಕ್ರಿಕೆಟ್‌ ತಂಡ ಚೋಕರ್ಸ್‌ ಹಣೆಪಟ್ಟಿ ಕಟ್ಟಿಕೊಂಡಿತ್ತು.