ಅಂತೂ ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆದ ಸ್ಪೀಕರ್

ಅಂತೂ ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆದ ಸ್ಪೀಕರ್

ಬೆಂಗಳೂರು: ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂವಿಧಾನ ಪೀಠಕ್ಕೆ ಅಗೌರವ ತೋರಿಸಿದ್ದು ಎಂಬ ಕಾರಣಕ್ಕೆ ಕಳೆದ ಅಧಿವೇಶನ ಸಮಯದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತು ಹಿಂಪಡೆಯುವಂತೆ ಬಿಜೆಪಿ ಹಲವು ಬಾರಿ ಸ್ಪೀಕರ್ ಸಿಎಂ‌ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧಲ್ಲಿ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್ ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಡಿಸಿಎಂ ಡಿಕೆ ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು. ಕೊನೆಗೂ 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿದೆ.