ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರಡುವ ವಿಶೇಷ ರೈಲುಗಳು,

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು, ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ತಿಳಿಸಿದೆ.
ಬೆಂಗಳೂರಿನ ಯಶವಂತಪುರ ನಿಲ್ದಾಣದಿಂದ ಎಸ್. ಎಸ್. ಎಸ್. ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ ಟೌನ್, ಬೆಳಗಾವಿ-ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತದೆ. ಪ್ರಯಾಣಿಕರು ಈ ರೈಲುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ರೈಲು ಸಂಖ್ಯೆ 06271 ಯಶವಂತಪುರ-ಎಸ್. ಎಸ್. ಎಸ್. ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 21ರಂದು ಮಧ್ಯಾಹ್ನ 2.30ಕ್ಕೆ ಹೊರಡಲಿದೆ. ರಾತ್ರಿ 9.50ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ತುಮಕೂರು, ಅರಸೀಕೆರೆ, ದಾವಣಗೆರೆ, ರಾಣಿಬೆನ್ನೂರು ಮತ್ತು ಎಸ್. ಎಮ್. ಎಮ್ ಹಾವೇರಿ ನಿಲ್ದಾಣಗಳಲ್ಲಿ ಆಗಮಿಸಿ/ ನಿರ್ಗಮಿಸಲಿದೆ.
ರೈಲುಸಂಖ್ಯೆ 06272 ಎಸ್. ಎಸ್. ಎಸ್. ಹುಬ್ಬಳ್ಳಿ-ಯಶವಂತಪುರ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22ರಂದು ಬೆಳಗಿನ ಜಾವ 1 ಗಂಟೆಗೆ ಹೊರಟು ಅದೇ ದಿನ ಬೆಳಗ್ಗೆ 8.50ಕ್ಕೆ ಯಶವಂತಪುರ ತಲುಪಲಿದೆ. ಎಸ್. ಎಮ್. ಎಮ್. ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಅರಸೀಕೆರೆ, ತುಮಕೂರು ಮೂಲಕ ರೈಲು ಸಂಚಾರ ನಡೆಸಲಿದೆ.
ಈ ರೈಲು 1 ಎರಡನೇ ಹವಾನಿಯಂತ್ರಿತ ದರ್ಜೆ, ಒಂದು 3ನೇ ಹವಾನಿಯಂತ್ರಿತ ದರ್ಜೆ, ಆರು ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದರ್ಜೆ, ಎರಡು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್ ಒಳಗೊಂಡು 14 ಬೋಗಿ ಹೊಂದಿದೆ.
ರೈಲು ಸಂಖ್ಯೆ 06505 ಯಶವಂತಪುರ-ಬೆಳಗಾವಿ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 21 & 22ರಂದು ಯಶವಂತಪುರ ನಿಲ್ದಾಣದಿಂದ ರಾತ್ರಿ 11.30ಕ್ಕೆ ಹೊರಟು ಮರುದಿನ ಬೆಳಗ್ಗೆ 9.25 ಎಸ್. ಎಸ್. ಎಸ್. ಹುಬ್ಬಳ್ಳಿ ತಲುಪಲಿದೆ. ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರ, ದಾವಣಗೆರೆ, ರಾಣಿಬೆನ್ನೂರು, ಎಸ್. ಎಮ್. ಎಮ್. ಹಾವೇರಿ, ಎಸ್. ಎಸ್. ಎಸ್. ಹುಬ್ಬಳ್ಳಿ, ಧಾರವಾಡ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳ ಮೂಲಕ ಸಾಗಲಿದೆ.
ರೈಲು ಸಂಖ್ಯೆ 06506 ಬೆಳಗಾವಿ-ಯಶವಂತಪುರ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22ರಂದು ಬೆಳಗಾವಿಯಿಂದ ಬೆಳಗ್ಗೆ 11.10ಕ್ಕೆ ಹೊರಟು ಅದೇ ದಿನ ರಾತ್ರಿ 10ಕ್ಕೆ ಯಶವಂತಪುರ ತಲುಪಲಿದೆ. ಖಾನಾಪುರ, ಲೋಂಡಾ, ಧಾರವಾಡ, ಎಸ್. ಎಸ್. ಎಸ್. ಹುಬ್ಬಳ್ಳಿ, ಎಸ್. ಎಮ್. ಎಮ್ ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ ಮತ್ತು ತುಮಕೂರು ಮಾರ್ಗವಾಗಿ ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 07305 ಬೆಳಗಾವಿ-ಯಶವಂತಪುರ ಸೂಪರ್ ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26ರಂದು ಬೆಳಗಾವಿ ರೈಲು ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 6.50ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
ರೈಲು ಸಂಖ್ಯೆ 06507 ಯಶವಂತಪುರ-ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22ರಂದು ಯಶವಂತಪುರ ನಿಲ್ದಾಣದಿಂದ ಬೆಳಗ್ಗೆ 10.30ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.30ಕ್ಕೆ ಶಿವಮೊಗ್ಗ ಟೌನ್ ತಲುಪಲಿದೆ. ರೈಲು ತುಮಕೂರು, ಅರಸೀಕೆರೆ, ಬೀರೂರು ಮತ್ತು ಭದ್ರಾವತಿ ಮೂಲಕ ಸಾಗಲಿದೆ.