ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೂ ಸ್ಪೋಕನ್ ಇಂಗ್ಲಿಷ್ ಕ್ಲಾಸ್: ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೂ ಸ್ಪೋಕನ್ ಇಂಗ್ಲಿಷ್ ಕ್ಲಾಸ್: ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲೂ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಯ ಮಕ್ಕಳಿಗೆ ಕಾಂಪಿಟೇಟ್ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.ಮಕ್ಕಳಿಗೆ ಸಂವಹನ ಭಾಷೆಯಾಗಿ ಇಂಗ್ಲೀಷ್ ಕಲಿಸಲು ಶಿಕ್ಷಣ ಇಲಾಖೆ ಪ್ಲಾನ್ ರೂಪಿಸಿದೆ. 

ನಗರ ಹಾಗೂ ಗ್ರಾಮೀಣ ಪ್ರದೇಶ ಕನ್ನಡ ‌ಮಾಧ್ಯಮ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಬ್ಬಿಣದ ‌ಕಡಲೆ ಇದ್ದಂತೆ.ಇದನ್ನು ಸರಳೀಕರಣಗೊಳಿಸಲು ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಪ್ರಾರಂಭಿಸಲು ‌ಮುಂದಾಗಿದ್ದೇವೆ ಅಂತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು. 

ಮೈಸೂರಿನ ಸಂಸ್ಥೆ ಮೂಲಕ ಶಿಕ್ಷಕರಿಗೆ ಟ್ರೈನಿಂಗ್ ಕೊಡಲಾಗುತ್ತಿದ್ದು, ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಶಿಕ್ಷಕರು, ಅತಿಥಿ ಶಿಕ್ಷಕರಿಗೆ ಹೊಣೆ ನೀಡಲಾಗಿದೆ. ಮಕ್ಕಳು ನಿರರ್ಗಳವಾಗಿ ಇಂಗ್ಲೀಷ್ ಮಾತನಾಡುವುದೇ ಈ ಯೋಜನೆಯ ಉದ್ದೇಶ ಮುಖ್ಯ ಉದ್ದೇಶವಾಗಿದೆ ಅಂತ ಸಚಿವರು ತಿಳಿಸಿದ್ದಾರೆ. 

ಮೊದಲ ಹಂತವಾಗಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ನಡೆಸಲು ನಿರ್ಧಾರ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 

ಇಂಗ್ಲೀಷ್ ಮಕ್ಕಳಿಗೆ ಅನಿವಾರ್ಯವಾಗಿದೆ ಹಾಗೂ ಸ್ಪೋಕನ್ ಇಂಗ್ಲಿಷ್ ಮಾಡಿಸುವ ಕೆಲಸವನ್ನ ಸ್ಪೋಕನ್ ಇಂಗ್ಲಿಷ್ ಶಿಕ್ಷಕರೇ ಪಾಠ ಮಾಡ್ತಾರೆ ಅಂತ ಸಚಿವರು ಹೇಳಿದ್ದಾರೆ.