ಶ್ರೀಲಂಕಾ ಅಧ್ಯಕ್ಷರ ಮನೆಗೆ ಜನ ನುಗಿದ್ದೇ ತಡ-ಪ್ರಧಾನಿ ರನಿಲ್ ರಾಜೀನಾಮೆ!

ಕೊಲಂಬೊ: ಶ್ರೀಲಂಕಾದಲ್ಲಿ ಅರಾಜಕತೆ ತೆಲೆದೋರಿದೆ. ಜನ ಸಿಟ್ಟಿಗೆದ್ದು ಅಧ್ಯಕ್ಷ ಗೋಟಬಯ ರಾಜಪಕ್ಸೆ ಮನೆಗೂ ನುಗ್ಗಿದ್ದಾರೆ. ಇದರ ಬೆನ್ನಲ್ಲಿಯೇ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್‌ಸಿಂಘೆ ರಾಜೀನಾಮೆ ನೀಡಿದ್ದಾರೆ.
"ನಾನು ರಾಜೀನಾಮೆ ನೀಡಿದ್ದೇನೆ. ಸದ್ಯ ದೇಶದಲ್ಲಿ ಪರಿಸ್ಥಿತಿ ಸರಿ ಇಲ್ಲ. ಇದರ ಸುಧಾರಣೆಗೆ ಸರ್ವ ಪಕ್ಷದ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇನೆ" ಎಂದು ರನಿಲ್ ವಿಕ್ರಮ್‌ಸಿಂಘೆ ರಾಜೀನಾಮೆ ಬಳಿಕ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ಸದ್ಯಕ್ಕೆ ಏನೂ ಸರಿಯಿಲ್ಲ ಬಿಡಿ. ಅಧ್ಯಕ್ಷ ಗೋಟಬಯ ರಾಜಪಕ್ಸೆ ಮನೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.