ಬೆಂಗಳೂರು : ನಾಳೆ ಮೇ 9ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಬಹು ನಿರೀಕ್ಷಿತ SSLC ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಮೇ 9ರಂದು ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಹೇಳಿದ್ದಾರೆ.
ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 6ನೇ ಅಡ್ಡರಸ್ತೆ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ://karresults.nic.in ವೆಬ್ಸೈಟ್ನಲ್ಲಿ ಬೆಳಿಗ್ಗೆ 10:30ರ ನಂತರ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.