ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ - ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ - ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಸಂಜೆ 7.30ಕ್ಕೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. 

ಕಾಲ್ತುಳಿತದ ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ನೀಡಲಿದ್ದಾರೆ. ಘಟನೆಗೆ ಕಾರಣವೇನು? ಎಷ್ಟು ಜನ ಸಾವನ್ನಪ್ಪಿದ್ದಾರೆ, ಮೃತ ಕುಟುಂಬಕ್ಕೆ ಪರಿಹಾರ ಇದರ ಕುರಿತು ಸುದ್ದಿಗೋಷ್ಠಿಯಲ್ಲಿ ಸಿಎಂ ಮಾಹಿತಿ ನೀಡಲಿದ್ದಾರೆ.