ಬೆಂಗಳೂರು: ಇಂದಿನಿಂದ ನಗರದ ಮನೆ ಬಾಗಿಲಿಗೆ ಬರಲಿದೆ ‘ರಾಜ್ಯ ಸರ್ಕಾರ’

ಬೆಂಗಳೂರು: ಇಂದಿನಿಂದ ನಗರದ ಮನೆ ಬಾಗಿಲಿಗೆ ಬರಲಿದೆ ‘ರಾಜ್ಯ ಸರ್ಕಾರ’

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಸಮಸ್ಯೆ, ಕುಂದು-ಕೊರತೆಗಳನ್ನು ಆಲಿಸಿ, ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ತಂದಿದೆ. ಅದೇ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ. 

ಬೆಂಗಳೂರಿನ ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ, ಬುಧವಾರ ನಡೆದ ಸರ್ಕಾರ ಮಹತ್ವದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಹಾಗೂ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ, ಬಿ.ಎ ಬಸವರಾಜು, ಮಾಜಿ ರಾಜ್ಯ ಸಭಾ ಸದಸ್ಯ ರಾಜೀವ್ ಗೌಡ, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. 

ಸದ್ಯ ಮಹಾದೇವಪುರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಕ್ರಮ ಹಂತ ಹಂತವಾಗಿ ಬೆಂಗಳೂರಿನ ಇತರ ಕಡೆಗಳಲ್ಲಿ, ವಲಯ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ನಡೆಯಲಿದೆ. ಗ್ಯಾರಂಟಿ ಯೋಜನೆ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಪರಿಹಾರ ಪಡೆಯಬಹದಾಗಿದೆ.