ಫೆ.19, 20 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ!

ಫೆ.19, 20 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ!

ಬೆಂಗಳೂರು : 'ಯುವನಿಧಿ' ಯೋಜನೆ ಜಾರಿಗೆ ತಂದ ಬೆನ್ನಲ್ಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದೆ. ಯುವನಿಧಿ ಯೋಜನೆ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಬೃಹತ್ ಮಟ್ಟದ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ. ಫೆ.19, 20 ರಂದು ಬೆಂಗಳೂರಿನಲ್ಲಿ ಸರ್ಕಾರದಿಂದ ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. 

 

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 'ಯುವ ಸಮೃದ್ಧಿ ಸಮ್ಮೇಳನ'ವನ್ನು ಫೆ. 19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ. 

ಆಸಕ್ತ ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು skillconnect.kaushalkar ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.