ಎಎಪಿ ಕಚೇರಿ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ದೆಹಲಿ : ಎಎಪಿ ಕಚೇರಿಯನ್ನು ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಜೂ.15 ರವರೆಗೆ ಗಡುವು ನೀಡಿ ಆದೇಶಿಸಿದೆ. ಪ್ರಸ್ತುತ ಪಕ್ಷದ ಕಚೇರಿ ಇರುವ ಜಾಗವು ದೆಹಲಿ ಹೈಕೋರ್ಟ್‌ಗೆ ಸಂಬಂಧಿಸಿದ್ದಾಗಿದ್ದು, ಇಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ತೆರೆಯಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕಚೇರಿಯನ್ನು ತಡವಾಗಿಯಾದರೂ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ.