ಅಕ್ರಮ ಹಣ ವರ್ಗಾವಣೆ ಆರೋಪ: ನವಾಬ್ ಮಲಿಕ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರಿಗೆ ಕಾನೂನಿನ ಉರುಳು ಮತ್ತಷ್ಟು ಬಿಗಿಯಾಗಿದೆ. ಜಾಮೀನು ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಹಾಗೂ ತನಿಖೆಯ ಹಂತದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.