ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಶಿಕ್ಷೆಯಿಂದ ಪಾರು..!

ನವದೆಹಲಿ : 'ಮೋದಿ ಉಪನಾಮ' ಹೇಳಿಕೆ ಹಿನ್ನೆಲೆ ಸೂರತ್ ನ್ಯಾಯಾಲಯ ವಿಧಿಸಿದ್ದ ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಸೂರತ್ ನ್ಯಾಯಾಲಯ ಹಾಗೂ ಗುಜರಾತ್ ಹೈಕೋರ್ಟ್ ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಅರ್ಜಿ ಸಲ್ಲಿಸಿದ್ದು. 2019 ರಲ್ಲಿ ಕೋಲಾರದಲ್ಲಿ ಎಲ್ಲಾ ಕಳ್ಳರ ಹೆಸರೂ ಮೋದಿ ಇರುವುದು ಏಕೆ? ಎಂದು ಪ್ರಶ್ನಿಸಿದ್ದರು.
ಸೂರತ್ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಈ ಕಾರಣಕ್ಕಾಗಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು, ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಜುಲೈ 21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ನಂತರ ವಿಚಾರಣೆಯನ್ನು ಆಗಸ್ಟ್ 4 ಕ್ಕೆ ಮುಂದೂಡಿತ್ತು ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.