Breaking News: ನೋಟುಗಳ ಅಮಾನ್ಯೀಕರಣವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: 500 ಹಾಗೂ 1,000 ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.
2016ರಲ್ಲಿ 1,000 ಮತ್ತು 500 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ನೋಟುಗಳ ಅಮಾನ್ಯಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಗುಂಪನ್ನು ವಜಾಗೊಳಿಸಿದ್ದು, ಇದನ್ನು ಹಿಂಪಡೆಯಲು ಸಾಧ್ಯವಿಲ್ಲ. ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಆರ್‌ಬಿಐ ಜೊತೆ ಸಮಾಲೋಚನೆ ನಡೆಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.