T20 WC | INDvsAUS | ಟೀಂ ಇಂಡಿಯಾ 'ಶಮಿ ಅಸ್ತ್ರ'ಕ್ಕೆ ಶರಣಾದ ಆಸೀಸ್ ಪಡೆ

ಬ್ರಿಸ್ಬೇನ್: ಕೆ.ಎಲ್.ರಾಹುಲ್ ಹಾಗೂ ಸೂರ್ಯಕುಮಾರ್ ಸ್ಫೋಟಕ ಅರ್ಧಶತಕದ, ಕೊನೆಯಲ್ಲಿ ಮೊಹಮ್ಮದ್ ಶಮಿ ಬೌಲಿಂಗ್ ಕಮಾಲ್‌ನಿಂದ ಭಾರತವು ಆಸ್ಟ್ರೇಲಿಯಾ ವಿರುದ್ಧ ಭಾರತವು 6 ರನ್‌ಗಳಿಂದ ಗೆದ್ದು ಬೀಗಿದೆ.
2022ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಇಂದು ನಡೆದ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದ್ದರು. ಬಳಿಕ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 180 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್ ಪರ ನಾಯಕ ಆರೋನ್ ಫಿಂಚ್ 79 ರನ್, ಮಿಚೆಲ್ ಮಾರ್ಷ್ 35 ರನ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 23 ರನ್ ಗಳಿಸಿದರು.
ಟೀಂ ಇಂಡಿಯಾ ಪರ ಕೇವಲ ಒಂದು ಓವರ್ ಬೌಲಿಂಗ್ ಮಾಡಿದ ಮೊಹಮ್ಮದ್ ಶಮಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಇನ್ನು ಭುನವೇಶ್ವರ್ ಕುಮಾರ್ 2 ವಿಕೆಟ್, ಅರ್ಶದೀಪ್ ಸಿಂಗ್, ಹರ್ಷಲ್ ಪಟೇಲ್ ಹಾಗೂ ಯಜುವೇಂದ್ರ ಚಹಾಲ್ ತಲಾ 1 ವಿಕೆಟ್ ಪಡೆದುಕೊಂಡು ತಂಡದ ಗೆಲುವಿಗೆ ಕೊಡುಗೆ ನೀಡಿದರು.