ಅಪಘಾತದಲ್ಲಿ ಟ್ಯಾಂಕರ್‌ನಿಂದ ಅನಿಲ ಸೋರಿಕೆ: ತಪ್ಪಿತು ಅನಾಹುತ

ಹಾಸನ: ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಿಲ ತುಂಬಿದ ಟ್ಯಾಂಕರ್ ಒಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಹೀಗಾಗಿ ಅನಿಲ ಸೋರಿಕೆ ಆಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಈ ಘಟನೆ ನಡೆದಿದೆ. ಮಾಹಿತಿ ತಿಳಿದ ಪೊಲೀಸರು ಕೂಡಲೇ ಅದೇ ಮಾರ್ಗದಲ್ಲಿ ಬರುತ್ತಿದ್ದ ವಾಹನಗಳನ್ನು ಬೇರೆ ಮಾರ್ಗದಲ್ಲಿ ಕಳುಹಿಸಿದ್ದಾರೆ. ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಾಲಕ ಸಿಕ್ಕಿಹಾಕಿಕೊಂಡು ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು, ಕ್ರೇನ್ ಸಹಾಯದಿಂದ ಚಾಲಕನ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಗ್ಯಾಸ್ ಟ್ಯಾಂಕರ್ ಬಿದ್ದ ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಾಹನ ಸಂಚರಿಸಲು ಬದಲಿ ಮಾರ್ಗ ಕಲ್ಪಿಸಿಕೊಡಲಾಗಿದೆ.