ಐತಿಹಾಸಿಕ ಗೆಲುವಿನ ನಂತರ WTC ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ

ದುಬೈ: ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂದು ಜಯ ಗಳಿಸಿ ನಂತರ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2023-25 ಅಂಕಗಳ ಪಟ್ಟಿಯಲ್ಲಿ 54.16% ಅಂಕಗಳೊಂದಿಗೆ ಅಗ್ರ ಸ್ಥಾನಕ್ಕೆ ಜಿಗಿದಿದೆ.
ಭಾರತ ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಗಳು ತಲಾ 50% ಅಂಕಗಳನ್ನು ಗಳಿಸಿವೆ. ಪಾಕಿಸ್ತಾನವು 45.83% ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.