ಶ್ರೀನಗರದಲ್ಲಿ ಮತ್ತೆ ಉಗ್ರರ ಗುಂಡಿನ ದಾಳಿ : ಓರ್ವ ನಾಗರಿಕ, ಪೊಲೀಸ್ ಅಧಿಕಾರಿ ಸಾವು

ಶ್ರೀನಗರದಲ್ಲಿ ಮತ್ತೆ ಉಗ್ರರ ಗುಂಡಿನ ದಾಳಿ : ಓರ್ವ ನಾಗರಿಕ, ಪೊಲೀಸ್ ಅಧಿಕಾರಿ ಸಾವು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಇಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕ ಮೃತಪಟ್ಟು ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟ ನಾಗರಿಕನನ್ನು ರೌಫ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ. ಶ್ರೀನಗರದ ರಯ ಹೊರಗಡೆ ನಿಂತಿದ್ದ ನಾಗರಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿರುವ ಹೆಚ್ಚುವರಿ ಸೇನಾ ಸಿಬ್ಬಂದಿ ದಾಳಿಕೋರರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹಾರಾದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ ಐ ಮೊಹಮ್ಮದ್ ಅಶ್ರಫ್ ಅವರು ಹುತಾತ್ಮರಾಗಿದ್ದಾರೆ.