ಮುಂದಿನ ವಾರ ಸಂವಿಧಾನದ ಕುರಿತು ಚರ್ಚೆ ನಡೆಸಲು ಒಪ್ಪಿಗೆ ಸೂಚಿಸಿದ ಕೇಂದ್ರ, ಪ್ರತಿಪಕ್ಷಗಳು

ಸಂಸತ್ತಿನಲ್ಲಿ ಕೇಂದ್ರ ಮತ್ತು ಪ್ರತಿಪಕ್ಷಗಳು, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರು ಸಂವಿಧಾನದ 75 ನೇ ವರ್ಷದ ಸ್ಮರಣಾರ್ಥವಾಗಿ ಚರ್ಚೆ ನಡೆಸಲು ಒಪ್ಪಿಕೊಂಡಿದ್ದಾರೆ.
ಡಿಸೆಂಬರ್ 13-14 ರಂದು ಲೋಕಸಭೆಯಲ್ಲಿ ಮತ್ತು ಡಿಸೆಂಬರ್ 16-17 ರಂದು ರಾಜ್ಯಸಭೆಯಲ್ಲಿ ಚರ್ಚೆಗಳು ನಡೆಯಲಿವೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಸಂಸದರು ಇದಕ್ಕೆ ಒಪ್ಪಿಗೆ ಸೂಚಿಸಿದರು.