ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾದಿರಿಸಿದ ನ್ಯಾಯಾಲಯ

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾದಿರಿಸಿದ ನ್ಯಾಯಾಲಯ

ನವದೆಹಲಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಕಾದಿರಿಸಿದೆ. 

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. 

ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಇದು ಚುನಾವಣೆ ವೇಳೆಯಲ್ಲಿ ಕೇಜ್ರಿವಾಲ್ ಅವರ ಭಾಗವಹಿಸುವಿಕೆಯನ್ನ ಮೊಟಕುಗೊಳಿಸುವ ಮತ್ತು ಅವರ ರಾಜಕೀಯ ಪಕ್ಷವನ್ನ ವಿಭಜಿಸುವ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ. ಸೆಕ್ಷನ್ 50 ಪಿಎಂಎಲ್ಎ ಅಡಿಯಲ್ಲಿ ಯಾವುದೇ ರೀತಿಯ ವಸ್ತುವಿಲ್ಲ ಎಂದು ಅವರು ಹೇಳಿದರು.