2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ಅಂತಿಮ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಾರಿ ಪುರುಷರು, ಮಹಿಳೆಯರು ಹಾಗೂ ಇತರ ಸೇರಿದಂತೆ ಒಟ್ಟು 5,05,48,553 ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಚುನಾವಣಾ ಆಯೋಗವು, ಕರ್ನಾಟಕ ವಿಧಾನಸಭಾ ಚುನಾವಣೆ-2023ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವುದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ.
ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದಂತ ಪಟ್ಟಿಯ ಅನುಸಾರ, ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ. ಪುರುಷರು- 2,54,49,725 ಮಹಿಳೆಯರು- 2,50,94,326, ಇತರರು- 4,502 ಇದ್ದಾರೆ ಎಂದು ಮಾಹಿತಿ ನೀಡಿದೆ.
ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆ ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆ, 1000 ಪುರಷರಿಗೆ/988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು – 6,50,532 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು- 1,66,521 ಎಂದು ಮಾಹಿತಿ ಹಂಚಿಕೊಂಡಿದೆ.