Breaking News: ಪೆನ್‌ಡ್ರೈವ್ ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್

Breaking News: ಪೆನ್‌ಡ್ರೈವ್ ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್‌ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. 

ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್‌ನಿಂದ ಹೊರಟು ಬೆಂಗಳೂರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ ಮ್ಯೂನಿಚ್‌ನಿಂದ ಬೆಂಗಳೂರಿಗೆ ಬುಕ್ ಆಗಿತ್ತು ಎನ್ನಲಾದ ಟಿಕೆಟ್ ಕ್ಯಾನ್ಸಲ್ ಆಗಿದೆ. 

ಇಂದು ಮ್ಯೂನಿಚ್‌ನಿಂದ 3:30ಕ್ಕೆ ಹೊರಡಲಿದ್ದ ವಿಮಾನ ಮಧ್ಯರಾತ್ರಿ 12:30ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದರೆ ಪ್ರಜ್ವಲ್ ಟಿಕೆಟ್ ಕ್ಯಾನ್ಸಲ್ ಮಾಡಿದರೂ ಹಣ ವಾಪಸ್ ಪಡೆದಿಲ್ಲವೆಂದು ಪೊಲೀಸ್ ಉನ್ನತ ಮೂಲಗಳಿಂದ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗೂ ಪ್ರಜ್ವಲ್ ಐದು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್‌ ಮಾಡಿದ್ದಾರೆ.