ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ಟೆಸ್ಟ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಇಂದಿನಿಂದಲೇ ಆರಂಭವಾಗಿದೆ. 

ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಓರ್ವ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಟೆಸ್ಟ್‌ಗೆ ಒಳಪಡಿಸಿದೆ. ಕಳೆದ 24 ಗಂಟೆಯಲ್ಲಿ 9 ಹೊಸ ಪ್ರಕರಣ ದಾಖಲಾಗಿದೆ.