ಹುಬ್ಬಳ್ಳಿ: ಯುವಜನೋತ್ಸವಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಸ್ವಾಗತಕೋರಿದ ಕ್ರೀಡಾ ಸಚಿವ

ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ರಾಜ್ಯಪಾಲರು ಹುಬ್ಬಳ್ಳಿಗೆ ಆಗಮಿಸಿದ್ದು, ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.