ರಾಜ್ಯದಲ್ಲಿ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ರಾಜ್ಯ ಮಂಡಳಿಯೊಂದಿಗೆ ಸಂಯೋಜಿತವಾಗಿರುವ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕರ್ನಾಟಕ ಸರ್ಕಾರದ ಯೋಜನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮಾರ್ಚ್ 7ರ ಆದೇಶವನ್ನು ರದ್ದುಗೊಳಿಸಿದ್ದಾರೆ.
2023-24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ನ್ಯಾಯಾಲಯದ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಈ ಆದೇಶ ಬೆನ್ನಲ್ಲೇ ಸರ್ಕಾರ ತನ್ನ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಬಳಿಕ ಮಾರ್ಚ್ 7ರಂದು (ಬುಧವಾರ) ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ನೀಡಿತ್ತು.