ಬಿಟ್ ಕಾಯಿನ್ ಬಗ್ಗೆ ಯಾವುದೇ ಚರ್ಚೆ ಆಗಲೇ ಇಲ್ಲ: ಸಿಎಂ ಬಸವರಾಜ್ ಬೊಮ್ಮಾಯಿ

ನವದೆಹಲಿ: ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಯಾವುದೇ ಚರ್ಚೆ ಮಾಡಲಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಪಿಎಂ ಭೇಟಿ ಬಳಿಕ ದೆಹಲಿಯಲ್ಲಿ ಮಾಧ್ಯಮದ ಮುಂದೆ ಹೇಳಿದ್ದಾರೆ. ಬಿಟ್ ಕಾಯಿನ್ ಬಗ್ಗೆ ನಾನೇ ಪ್ರಧಾನಿಗಳಿಗೆ ಪ್ರಸ್ತಾಪಿಸಿದೆ. ಇದರ ಬಗ್ಗೆ ನೀವೂ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ದಿಟ್ಟತನದಿಂದ ನಿಷ್ಠೆಯಿಂದ ನಿಮ್ಮ ಕೆಲಸವನ್ನ ನೀವು ಮಾಡಿಕೊಂಡು ಹೋಗಿ ಎಂದು ಹೇಳಿದ್ದಾರೆ ಅಂತಲೇ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.