ಹಿಮಾಚಲದ ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಎಎಪಿ ಸೇರಲಿದ್ದಾರೆ: ಸಿಸೋಡಿಯಾ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕನಿಷ್ಠ 1000 ನಾಯಕರು ಮತ್ತು ಕಾರ್ಯಕರ್ತರು ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ. ಇದರಲ್ಲಿ ಬಿಜೆಪಿಯ ಮುಂಚೂಣಿ ನಾಯಕರೂ ಇದ್ದಾರೆ ಎಂದು ಎಎಪಿ ರಾಷ್ಟ್ರೀಯ ವಕ್ತಾರ ಹಾಗೂ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಮಾಚಲ್ ಪ್ರದೇಶದ ಜನರಿಗೆ ಆಮ್ ಆದ್ಮಿ ಆಡಳಿತ ಬೇಕಾಗಿದೆ. ಅಲ್ಲಿನ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ಸರ್ಕಾರದ ಮೇಲೆ ಜನರಿಗೆ ಭರವಸೆ ಉಳಿದಿಲ್ಲ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ತೊರೆಯಲಿರುವ ಸಾವಿರಾರು ಕಾರ್ಯಕರ್ತರು ಆಮ್ ಆದ್ಮಿ ಸೇರಲಿದ್ದಾರೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.