ರಾಜ್ಯದಲ್ಲಿ ಮತ್ತೆರಡು ದಿನ ಬಿರುಗಾಳಿ ಸಹಿತ ಮಳೆ : 17 ಜಿಲ್ಲೆಗಳಿಗೆ ಅಲರ್ಟ್!

ರಾಜ್ಯದಲ್ಲಿ ಮತ್ತೆರಡು ದಿನ ಬಿರುಗಾಳಿ ಸಹಿತ ಮಳೆ : 17 ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು : ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಮುಂದುವರಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಈ‌ ಹಿನ್ನೆಲೆ ಒಟ್ಟು 17 ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಮಳೆ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ. ಕಲಬುರಗಿ, ವಿಜಯಪುರ, ಕೊಪ್ಪಳ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.