ಧಾರವಾಡ ಜಿಲ್ಲೆಯಾದ್ಯಂತ 194 ಪಾಸಿಟಿವ್, 3 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 185 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.
ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 63821 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 9 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, 194 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 501 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 63821 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 60609 ಜನರ ವರದಿ ನೆಗೆಟಿವ್ ಎಂದು ಬಂದಿದೆ.
9242 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 6531 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
271 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2440 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 65002 ಜನರ ಮೇಲೆ ನಿಗಾ ಇಡಲಾಗಿದ್ದು, 19029 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
4551 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 38982 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.