ಧಾರವಾಡ ಜಿಲ್ಲೆಯಾದ್ಯಂತ 196 ಪಾಸಿಟಿವ್, 244 ನೆಗೆಟಿವ್, 6 ಸಾವು

ಧಾರವಾಡ : ಜಿಲ್ಲೆಯಾದ್ಯಂತ ಇಂದು ಮತ್ತೆ 894 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 49343 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 244 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, 196 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 967 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 49343 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 45652 ಜನರ ವರದಿ ನೆಗೆಟಿವ್ ಎಂದು ಬಂದಿದೆ.
5966 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 3242 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
193 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2531 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 50641 ಜನರ ಮೇಲೆ ನಿಗಾ ಇಡಲಾಗಿದ್ದು, 8495 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
6141 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 33474 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.