ಧಾರವಾಡ ಜಿಲ್ಲೆಯಾದ್ಯಂತ 221 ಪಾಸಿಟಿವ್, 2 ಸಾವು

ಧಾರವಾಡ ಜಿಲ್ಲೆಯಾದ್ಯಂತ 221 ಪಾಸಿಟಿವ್, 2 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 744 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. 

ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 64565 ಕ್ಕೆ ಏರಿಕೆಯಾಗಿದೆ. 

ನಿನ್ನೆ ಕಳುಹಿಸಿದ ಮಾದರಿ ಪೈಕಿ ಯಾವೊಬ್ಬ ವ್ಯಕ್ತಿಯ ವರದಿ ಕೂಡ ನೆಗೆಟಿವ್ ಬಂದಿಲ್ಲ. 221 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 501 ಜನರ ವರದಿ ಬರುವುದು ಬಾಕಿ ಉಳಿದಿದೆ. 

ಇದುವರೆಗೆ 64565 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 61365 ಜನರ ವರದಿ ನೆಗೆಟಿವ್ ಎಂದು ಬಂದಿದೆ. 

9463 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 6764 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 

273 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2426 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಜಿಲ್ಲೆಯಾದ್ಯಂತ ಒಟ್ಟು 65746 ಜನರ ಮೇಲೆ ನಿಗಾ ಇಡಲಾಗಿದ್ದು, 9861 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 

13310 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 40149 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.