ಧಾರವಾಡ ಜಿಲ್ಲೆಯಾದ್ಯಂತ 276 ಪಾಸಿಟಿವ್, 9 ಸಾವು

ಧಾರವಾಡ : ಜಿಲ್ಲೆಯಾದ್ಯಂತ ಇಂದು ಮತ್ತೆ 257 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 50081 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ ಕೇವಲ 11 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, 276 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 907 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 50081 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 46728 ಜನರ ವರದಿ ನೆಗೆಟಿವ್ ಎಂದು ಬಂದಿದೆ.
6399 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 3953 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
206 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 2240 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 51379 ಜನರ ಮೇಲೆ ನಿಗಾ ಇಡಲಾಗಿದ್ದು, 8866 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 6089 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 34184 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ