ಬ್ರೇಕಿಂಗ್: ರಾಜ್ಯದಲ್ಲಿ ಇಂದು 7,908 ಮಂದಿಗೆ ಪಾಸಿಟಿವ್, 104 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೌದ್ರಾವತಾರಕ್ಕೆ ಕಡಿವಾಣ ಬೀಳುತ್ತಿಲ್ಲ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದರ ಜತೆಗೆ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಹೊಸದಾಗಿ 7,908 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,11,108 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 104 ಮಂದಿ ಡೆಡ್ಲಿ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 3,717 ಕ್ಕೆ ಏರಿಕೆಯಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದ್ದು, 80,883 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಅಥವಾ ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ. ಒಟ್ಟು 5,257 ಜನರು ಗುಣಮುಖರಾಗಿ ಆಸ್ಪತ್ಯೆಇಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು 2,452 ಜನರು ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84,185ಕ್ಕೆ ತಲುಪಿದೆ. ಇಂದು ಕೇವವಲ 463 ಜನರಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ35,117ಕ್ಕೆ ಏರಿಕೆಯಾಗಿದೆ.