ದಳ ಬಿಟ್ಟು ಕಮಲ ಹಿಡಿದ ಹೊರಟ್ಟಿ : ಅಧಿಕೃತವಾಗಿ ಬಿಜೆಪಿಗೆ ಎಂಟ್ರಿ

ಬೆಂಗಳೂರು: ಹಿರಿಯ ರಾಜಕಾರಣಿ ವಿಧಾನ ಪರಿಷತ್ ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ತೊರೆದು ಅಧಿಕೃತವಾಗಿ ಇಂದು ಬಿಜೆಪಿ ಸೇರಿದ್ದಾರೆ.
ಆರ್ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ವೇಳೆ ಸಿಎಂ ಬೊಮ್ಮಾಯಿ ಮಾತನಾಡಿ ಹೊರಟ್ಟಿ ಸಾಹೇಬರು 45 ವರ್ಷಗಳಿಂದ ವಿಧಾನಪರಿಷತ್ ಸದಸ್ಯರಾಗಿ, ಸಭಾಪತಿಗಳಾಗಿ, ಮಂತ್ರಿಗಳಾಗಿ ಅಪಾರ ಅನುಭವ ಹೊಂದಿದ್ದಾರೆ. ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ. ಆ ಭಾಗದಲ್ಲಿ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಅವರು ಪಕ್ಷಕ್ಕೆ ಬರುತ್ತಿರುವುದು ಬಿಜೆಪಿಗೆ ಆನೆ ಬಲ ಬಂದಿದೆ ಎಂದರು.