ರಾಜ್ಯದಲ್ಲಿ ಇಂದು 148 ಜನರಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಶತಕದ ಗಡಿ ದಾಟಿದ್ದು, ನಿನ್ನೆಗಿಂತ ಇಂದು ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ನಿನ್ನೆ 107 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, ಇಂದು 148 ಕೇಸ್ ಪತ್ತೆಯಾಗಿದೆ. ಈವರೆಗೂ 39,48,092 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 1.84ರಷ್ಟಿದೆ. ಇಂದು 8,037 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 162 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,06,189 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,060ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,801 ಸಕ್ರಿಯ ಪ್ರಕರಣಗಳಿವೆ.