ರಾಜ್ಯದಲ್ಲಿಂದು 104 ಕೋವಿಡ್ ಕೇಸ್ ಪತ್ತೆ

ರಾಜ್ಯದಲ್ಲಿಂದು 104 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದೆ. ಇಂದು 104 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3947726 ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು 108 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3905844 ಕ್ಕೆ ಏರಿಕೆಯಾಗಿದೆ. 

ಇನ್ನು 1780 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ 0.98% ನಷ್ಟಿದೆ. ಇದೇ ವೇಳೆ 10566 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.ಕೊರೊನಾದಿಂದ ಒಂದು ಸಾವು ಸಂಭವಿಸಿದ್ದು ಒಟ್ಟು ಸಾವಿನ ಸಂಖ್ಯೆ 40060 ಕ್ಕೆ ತಲುಪಿದೆ.