ಹಾಸನ ಟಿಕೆಟ್ ಬಗ್ಗೆ ನಾಳೆ ಸಭೆ; ಎಚ್​ಡಿ ಕುಮಾರಸ್ವಾಮಿ

ಹಾಸನ ಟಿಕೆಟ್ ಬಗ್ಗೆ ನಾಳೆ ಸಭೆ; ಎಚ್​ಡಿ ಕುಮಾರಸ್ವಾಮಿ

ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆಟಿ-20 ಮ್ಯಾಚ್ರೀತಿ ಕುತೂಹಲವಿದೆ. ಕೊನೆಯ ಓವರ್ವರೆಗೂ ಕುತೂಹಲವಿರಲಿದೆ. ಹಾಸನ ಕ್ಷೇತ್ರದಲ್ಲಿ ಟಿಕೆಟ್​​ ನೀಡಿಕೆ ಬಗ್ಗೆ ಚರ್ಚಿಸುವ ಸಲುವಾಗಿ ನಾಳೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಸಭೆಗೆ ರೇವಣ್ಣ ಅವರನ್ನು ಕರೆದಿಲ್ಲ. ಹಾಸನ ಕ್ಷೇತ್ರದ ಟಿಕೆಟ್ಬಗ್ಗೆ ರಾಜ್ಯದ ಜನರಿಗೂ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ಘೋಷಣೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.