ಟೊಯೊಟಾ ಸಂಸ್ಥೆ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 64 ವರ್ಷ ವಯಸ್ಸಿನ ವಿಕ್ರಮ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಟೊಯೊಟಾ ಇಂಡಿಯಾ ಸಂಸ್ಥೆಯ ಸಾಮಾಜಿಕ ಮಾಧ್ಯಮಗಳ ಮೂಲಕ ಈ ಹೇಳಿಕೆ ನೀಡಲಾಗಿದೆ. ಹೇಳಿಕೆಯಲ್ಲಿ, “ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ಇಂದು ಬುಧವಾರ (ನವೆಂಬರ್ 30) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆʼ ಎಂದು ತಿಳಿಸಲಾಗಿದೆ.
ಮೃತರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಹಾಗೂ ಪುತ್ರಿ ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ.