ಪಿಯು ತರತಗತಿಗಳಲ್ಲಿ 'ನೀಟ್' ತಯಾರಿಗೆ ತರಬೇತಿ: ಇಲಾಖೆ ನಿರ್ಧಾರ

ಬೆಂಗಳೂರು: ಪಿಯುಸಿ ಹಂತದಲ್ಲಿ ನೀಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ. ಬರುವ ಶೈಕ್ಷಣಿಕ ವರ್ಷದಿಂದಲೇ ಇದನ್ನು ಜಾರಿಗೆ ತರಲು ನಿರ್ಧರಿಸಿದೆ. ಇದರೊಂದಿಗೆ ಸಿಇಟಿ ತರಬೇತಿಯನ್ನೂ ನೀಡುವ ಯೋಜನೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಎನ್‌ಸಿಇಆರ್‌ಟಿ ಪಠ್ಯ ಕ್ರಮದ ಅನ್ವಯ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜುಗಳ ವಿದ್ಯರ್ಥಿಗಳಿಗೆ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಮುಂದಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಎಂಜಿನಿಯರಿಂಗ್, ವೈದ್ಯಕೀಯ ಸೇರಿ ಇತರೆ ವೃತ್ತಿಪರ ಕೋರ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನಕೂಲವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪ್ರಥಮ ಪಿಯುಸಿ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡಲು ನಿರ್ಧರಿಸಿದೆ.