ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪಾವತಿಗೆ ಅನುದಾನ ರಿಲೀಸ್

ಬೆಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆ ರಾಜ್ಯದ ಎಲ್ಲ ಸಾರಿಗೆ ನಿಗಮಗಳು ನಷ್ಟದಲ್ಲಿದ್ದವು. ಸದ್ಯದ ಮಟ್ಟಿಗೆ ಚೇತರಿಕೆ ಕಾಣುತ್ತಿವೆ. ಈ ನಡುವೆ ಸರ್ಕಾರ ಸಾರಿಗೆ ನೌಕರರಿಗೆ ಹಬ್ಬಕ್ಕೆ ಸಿಹಿಸುದ್ದಿ ನೀಡಿದೆ. ಆಗಸ್ಟ್ 2021ರ ಮಾಹೆಯ ವೇತನ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ನಡವಳಿಗಳನ್ನು ಹೊರಡಿಸಿದ್ದಾರೆ. ನಾಲ್ಕು ಸಾರಿಗೆ ಸಂಸ್ಥೆಗಳ ಅಧಿಕಾರಿ ಸಿಬ್ಬಂದಿಗಳ ಏಪ್ರಿಲ್, ಮೇ, ಜೂನ್ ಮತ್ತು ಜುಲೈ 2021ರ ಮಾಹೆಯ ವೇತನ ವೆಚ್ಚಕ್ಕಾಗಿ ಬಳಸಿಕೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿತ್ತು.