ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್

ಪಟ್ಟಾಭಿಷೇಕ : ಹರ್ಷ ವ್ಯಕ್ತಪಡಿಸಿದ ಸ್ನೇಹಿತೆ
ವಾಷಿಂಗ್ಟನ್ ಡಿಸಿ : ಇನ್ನೇನು ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. 4 ವರ್ಷಗಳ ಬಳಿಕ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾದ ಸ್ನೇಹಿತೆಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿ, ರೊಟುಂಡಾ ಕಟ್ಟಡದಲ್ಲಿ ರಾತ್ರಿ 10.30ಕ್ಕೆ ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಟ್ರಂಪ್ ಅಭಿಮಾನಿ ಬಳಗವೇ ಹರಿದುಬಂದಿದೆ. ಇನ್ನು ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲಾನಿಯಾ ಅವರು ಸಹ ಟ್ರಂಪ್ ಜೊತೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.