ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌ : ನಾಳೆ ಸಿಎಂ ಆಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌ : ನಾಳೆ ಸಿಎಂ ಆಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ

ಚೆನ್ನೈ: ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿರುವ ನಟ ವಿಜಯ್, ನಾಳೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಈ ಪ್ರಮಾಣ ವಚನ ಸಮಾರಂಭ ನಡೆಯಲಿದೆ. 

ವಿಜಯ್ ತಮ್ಮ ಬಳಿ 120 ಶಾಸಕರ ಸ್ಪಷ್ಟ ಬೆಂಬಲವಿದೆ ಎಂದು ಹಕ್ಕು ಮಂಡಿಸಿ, ಸರ್ಕಾರ ರಚನೆಗೆ ರಾಜ್ಯಪಾಲರನ್ನು ಆಹ್ವಾನಿಸಿದ್ದರು. ಈ ನಿಟ್ಟಿನಲ್ಲಿ, ಅವರು ರಾಜ್ಯಪಾಲರನ್ನು ಮೂರು ಬಾರಿ ಭೇಟಿಯಾಗಿ ತಮ್ಮ ಬಹುಮತವನ್ನು ಮನವರಿಕೆ ಮಾಡಿಕೊಟ್ಟಿದ್ದರು. ಅಂತಿಮವಾಗಿ, ಸರ್ಕಾರ ರಚಿಸುವ ಹಕ್ಕನ್ನು ಮಂಡಿಸಿದ ವಿಜಯ್‌ಗೆ, ರಾಜ್ಯಪಾಲರು ನಾಳೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ.