ಹಾವೇರಿ: ಜಿಲ್ಲೆಯಲ್ಲಿ ಜುಲೈ 26, 27ರಂದು ಪ್ರಾಥಮಿಕ ಪ್ರೌಢಶಾಲೆಗೆ ಎರಡು ದಿನ ರಜೆ

ಹಾವೇರಿ: ಜಿಲ್ಲೆಯಲ್ಲಿ ಜುಲೈ 26, 27ರಂದು ಪ್ರಾಥಮಿಕ ಪ್ರೌಢಶಾಲೆಗೆ ಎರಡು ದಿನ ರಜೆ

ಹಾವೇರಿ: ಹಾವೇರಿ ಜಿಲ್ಲೆಯಾದ್ಯಂತ ಇಂದು, ನಾಳೆ (ಜುಲೈ 26 ಮತ್ತು 27) ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್ ಆದೇಶಿಸಿದ್ದಾರೆ. 

ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆ ಅಧಿಕವಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಈ ರಜೆ ದಿನಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿ ಮೂಲಕ ಸರಿತೊಗಿಸಲಾಗುತ್ತದೆ.